RA NEWS:-ಜಗ ಮೆಚ್ಚಿದ ಸಂತನಿಗೆ ನಮೋ ನಮಃ

ಜಗ ಮೆಚ್ಚಿದ ಸಂತನಿಗೆ ನಮೋ ನಮಃ

ನಾವು ಈ ಕಾಲಘಟ್ಟದಲ್ಲಿ ಬದುಕಿದ್ದೆವೆ ಎಂದರೇ,  ಈ ತಲೆಮಾರಿನಲ್ಲಿದ್ದೆವೆ ಎಂದು ಸಂತಸ ಪಡಲು ಹಲವು ಕಾರಣಗಳಿರಬಹುದು.ಆದರೆ ಪ್ರಮುಖವಾಗಿ ನಾವು ನಡೆದಾಡುವ ದೇವರನ್ನ ನೋಡಿದ್ದೀವಿ ಅನ್ನೋದೇ ನಮ್ಮ ಜನ್ಮದ ಸಾರ್ಥಕ.ಅಂತಹಾ ದೈವ ಪುರುಷ ಮಹಾನ್ ಸಂತ ಡಾ:ಶಿವಕುಮಾರ ಸ್ವಾಮಿಗಳು ನೂರಾಹನ್ನೋಂದು ವರ್ಷಕ್ಕೆ ಪಾದಾರ್ಪಣೆ ಮಾಡಿರುವುದು ಈ ಭೂಮಿಯ ಪುಣ್ಯ.

ಅನ್ನ, ಅಕ್ಷರ, ಜ್ಞಾನ  ಎಂಬ  ತ್ರಿವಿಧ ದಾಸೋಹಿ. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ ೩೧೯೩೦ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.

Dr Shivakumara swamiji The Great legend
Dr Shivakumara swamiji The Great legend

ಕರ್ನಾಟಕ ರತ್ನ ಪ್ರಶಸ್ತಿಯನ್ನು ಡಾ||ಶ್ರೀ ಶಿವಕುಮಾರ ಸ್ವಾಮಿಗಳವರಿಗೆ ನೀಡಲಾಗಿದೆ. ಶ್ರೀ ಕ್ಷೇತ್ರದ ಮಠಾಧಿಪತಿಗಳು ಡಾ|| ಶ್ರೀ ಶಿವಕುಮಾರ ಸ್ವಾಮಿಗಳು. ಕಿರಿಯ ಸ್ವಾಮಿಜಿ ಶ್ರೀ ಸಿದ್ದಲಿಂಗಸ್ವಾಮಿಗಳು ಕ್ಷೇತ್ರದ ಹಿಂದಿನ ಮಠಾಧಿಪತಿಗಳು ಶ್ರೀಉದ್ದಾನ ಶಿವಯೋಗಿಗಳು. ಇವರು ಎಡೆಯೂರು ಸಿದ್ಧಲಿಂಗೇಶ್ವರರಶಿಷ್ಯಪರಂಪರೆಗೆ

ಸೇರಿದವರಾಗಿದ್ದಾರೆ.

ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂಧರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು. ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು.

Dr Shivakumara swamiji The Great legend
Dr Shivakumara swamiji The Great legend

 

ಆರಂಭದ ದಿನಗಳಲ್ಲಿ ‘ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ’ ಎಂಬ ಆಡು ನುಡಿಗಳೂ ಕೇಳಿಬಂದಿದ್ದವು. ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ. ಶ್ರೀ ಅಟವೀ ಸ್ವಾಮಿಗಳ ಹಾಗು ಲಿ. ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು, ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ. ಅಷ್ಟರಲ್ಲಾಗಲೇ ಸ್ವಾತಂತ್ರ್ಯ ಕಂಡು ಸ್ವಾಯತ್ತತೆಯೆಡೆಗೆ ಅಡಿಯಿಡುತ್ತಿದ್ದ ಭಾರತ ಶಿಕ್ಷಣದ ಮಹತ್ವವನ್ನು ದೇಶದೆಲ್ಲೆಡೆ ಪಸರಿಸಲು ಹಾಗು ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಸಲು ಸರ್ಕಾರವೂ ಸೇರಿದಂತೆ ಅನೇಕ ಮಹನೀಯರು ಮೊದಲಾದರು. ಆದರೆ ಸಿದ್ದಗಂಗೆಯಲ್ಲಿ ಅದಾಗಲೇ ಅವೆಲ್ಲವೂ ಕಾರ್ಯರೂಪಕ್ಕೆ ಬಂದಾಗಿತ್ತು. ಸಾಲದ್ದಕ್ಕೆ ಅಲ್ಲಿ ಕಲಿಯುತ್ತಿದ್ದ ಬಹುಪಾಲು ಎಲ್ಲರೂ ಗ್ರಾಮೀಣ ಮಕ್ಕಳೇ. ಈ ಕಾರ್ಯ ರಾಷ್ಟ್ರ ಮಟ್ಟದಲ್ಲೂ ಬಹಳ ಶ್ಲಾಘನೆಗೆ ಒಳಗಾಗಿ, ಸಿದ್ದಗಂಗೆಯ ಕೀರ್ತಿ ಎಲ್ಲೆಡೆ ಹರಡಲು ಪ್ರಾರಂಭವಾಯಿತು.ಸಿದ್ದಗಂಗೆಯ ಕೀರ್ತಿ ಪಸರಿಸಿದಂತೆ ಅಲ್ಲಿನ ಭಕ್ತ ವರ್ಗವೂ, ವಿಧ್ಯಾರ್ಥಿ ಸಂಕುಲವೂ ಕಾಲಕ್ರಮೇಣ ಹೆಚ್ಚುತ್ತಾ ಹೋಯಿತು. ಇದು ಸ್ವಾಮೀಜಿಯವರ ದೂರದರ್ಶಿತ್ವಕ್ಕೆ ಒಂದು ಉದಾಹರಣೆ.

ಶತಮಾನದ ಸಂತ ಪುಣ್ಯ ಪುರುಷ ಶಿವಕುಮಾರ ಸ್ವಾಮಿಗಳಿಂದ ಮನುಕುಲಕ್ಕೆ ನಿರಂತರ ಶುಭವಾಗಲಿ.

Please follow and like us:
0

Leave a Comment